National

*ಸಂಸತ್ ಬಜೆಟ್ ಅಧಿವೇಶನ ಆರಂಭ*

ಪ್ರಗತಿವಾಹಿನಿ ಸುದ್ದಿ: ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಫೆ.1ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದೆ. ಫೆ.5ರಂದು ದೆಹಲಿ ವಿಧಾನಸಭಾ ಚುನಾವಣೆ ನಡೆಯಲಿರುವುದರಿಂದ ಸಂಸತ್ ಕಲಾಪ ನಡೆಯುವುದಿಲ್ಲ. ಇಂದು ಮಧ್ಯಾಹ್ನ 12 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ.

Home add -Advt

ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಯಾಗ್ ರಾಜ್ ನಲ್ಲಿ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಬಗ್ಗೆ ಸಂತಾಪ ಸೂಚಿಸಿದರು. ಗಾಯಾಳುಗಳು ಬೇಗನೇ ಗುಣಮುಖರಾಗಲಿ ಎಂದರು.

ದೇಶದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಶ್ರಮಿಸುತ್ತಿದೆ. ಸದ್ಯದಲ್ಲೇ ಭಾರತ ವಿಶ್ವದಲ್ಲೇ 3ನೇ ಆರ್ಥಿಕ ದೇಶವಾಗಲಿದೆ. ಒಂದು ದೇಶ, ಒಂದು ಚುನವಣೆಗೆ ಹೆಚ್ಚಿನ ಆದ್ಯತೆ ಕೊಟ್ಟಿದ್ದೇವೆ. ಬದವರ ಅಭಿವೃದ್ದಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ. ರೈತರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದರು.

Related Articles

Back to top button