Latest

ಸ್ಯಾಂಡಲ್ ವುಡ್ ನಟಿಯರಿಗೆ ಮತ್ತೆ ಜೈಲೇ ಗತಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾಣಿ ಅವರ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆಯಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿಯರಾದ ರಾಗಿಣಿ ಹಾಗೂ ಸಂಜನಾ ಅವರ ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಎನ್ ಡಿಪಿಎಸ್ ವಿಶೇಷ ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ಸಿಸಿಬಿ ಪರ ವಕೀಲರು ನಟಿಯರಿಬ್ಬರೂ ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಹಲವು ಸಾಕ್ಷ್ಯಗಳು ಸಿಕ್ಕಿದ್ದು, ಈ ಹಂತದಲ್ಲಿ ಜಾಮೀನು ನೀಡಿದರೆ ತನಿಖೆಗೆ ಅಡ್ಡಿಯಾಗಲಿದೆ ಈ ನಿಟ್ಟಿನಲ್ಲಿ ನಟಿಯರಿಗೆ ಜಾಮೀನು ನೀಡದಂತೆ ಮನವಿ ಮಾಡಿದ್ದಾರೆ.

Related Articles
Home add -Advt

ನಟಿಯರ ಪರ ವಕೀಲರ ಹಾಗೂ ಸಿಸಿಬಿ ವಕೀಲರ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಇಬ್ಬರು ನಟಿಯರ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿ ಆದೇಶ ನೀಡಿದೆ. ಈ ಮೂಲಕ ರಾಗಿಣಿ ಮತ್ತು ಸಂಜನಾಗೆ ಮತ್ತೆ ಜೈಲೇ ಗತಿಯಾಗಿದೆ.

Related Articles

Back to top button