Latest

ವಿಧಾನಸಭೆಗೆ ಕುದುರೆ ಏರಿ ಬಂದ ಕಾಂಗ್ರೆಸ್ ಶಾಸಕಿ 

ಪ್ರಗತಿವಾಹಿನಿ ಸುದ್ದಿ; ರಾಂಚಿ; ಅಂತಾರಾಷ್ಟ್ರೀಯ ಮಹಿಳಾ ದಿನದ ವಿಶೇಷತೆಗಾಗಿ ಜಾರ್ಖಂಡ್‍ನ ಕಾಂಗ್ರೆಸ್ ಶಾಸಕಿ  ವಿಭಿನ್ನ ರೀತಿಯಲ್ಲಿ ವಿಧಾನಸಭೆಗೆ ಎಂಟ್ರಿ ಕೊಟ್ಟಿದ್ದಾರೆ.

ಅಂಬಾ ಪ್ರಸಾದ್, ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯ ಬಾರ್ಕಗಾಂವ್ ವಿಧಾನಸಭಾ ಕ್ಷೇತ್ರದ ಶಾಸಕಿ ಕುದುರೆ ಏರಿ ವಿದಾನಸಭೆಗೆ ಬಂದು  ಈ ಕುದುರೆಯನ್ನು ನನಗೆ ಸೇನೆಯ ನಿವೃತ್ತ ಅಧಿಕಾರಿ ರವಿ ರಾಥೋಡ್ ಅವರು ಅಂತಾರಾಷ್ಟ್ರೀಯ ಮಹಿಳಾ ದಿನಚರಣೆಯ ಪ್ರಯುಕ್ತ ಕೊಡುಗೆಯಾಗಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

Home add -Advt

ಪ್ರತಿ ಮಹಿಳೆಯಲ್ಲೂ ದುರ್ಗಾ, ಝಾನ್ಸಿ ರಾಣಿ ಇದ್ದಾಳೆ. ಪ್ರತಿ ಸವಾಲನ್ನು ಮಹಿಳೆ ಶಕ್ತಿಯಿಂದ ಎದುರಿಸಬೇಕು ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಿದ್ದಾರೆ. ಎಲ್ಲಾ ಪಾಲಕರು ತಮ್ಮ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಬೇಕು ಎಂದಿದ್ದಾರೆ ಅಂಬಾ ಪ್ರಸಾದ್.
ಬೆಳಗಾವಿಗೆ ಆಗಮಿಸಿದ ರಾಜ್ಯಪಾಲ ಗೆಹ್ಲೋಟ್

Related Articles

Back to top button