
ಪ್ರಗತಿವಾಹಿನಿ ಸುದ್ದಿ, ಕಾರವಾರ: ಗೋಕರ್ಣದಲ್ಲಿ ಪಿ.ಎಸ್.ಐ ನವೀನ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ನಾಲ್ಕು ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದೆ.
ಹುಬ್ಬಳ್ಳಿಯ ನೇಕಾರ ನಗರದ ವಿನಾಯಕ್ ಪ್ರೇಮನಾಥ್ ಹಬೀಬ್ (25) ಎಂಬುವವನನ್ನು ವಶಕ್ಕೆ ಪಡೆದಿದ್ದು ಆತನಿಂದ 80 ಸಾವಿರ ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಇಂದು ಗೋಕರ್ಣದ ಬೇಲೆಹಿತ್ತಲಲ್ಲಿ ಗಾಂಜಾ ಮಾರಾಟ ಮಾಡುವಾಗ ಮಾಲು ಸಮೇತ ಈ ಆರೋಪಿ ಸಿಕ್ಕಿಬಿದ್ದಿದ್ದು ಘಟನೆ ಸಂಬಂಧ ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿನ್ನೆ ಕೂಡ ಗಾಂಜಾ ವಶಪಡಿಸಿಕೊಂಡಿದ್ದು ಇಲ್ಲಿ ಉಲ್ಲೇಖನೀಯ.