Latest

BJPಯ 14 ಬಂಡಾಯ ಅಭ್ಯರ್ಥಿಗಳ ಉಚ್ಛಾಟನೆ

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಅಖಾಡ ಕಾವೇರಿದ್ದು, 14 ಜನ ಬಿಜೆಪಿ ಬಂಡಾಯ ಅಭ್ಯರ್ಥಿಗಳನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.

ಬಿಜೆಪಿ ಬಂದಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದ 14 ಜನ ಬಿಜೆಪಿ ಬಂಡಾಯ ಅಭ್ಯರ್ಥಿಗಳನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿ ವಿಜಯಪುರ ಜಿಲ್ಲಾ ಬಿಜೆಪಿ ಅಧ್ಯಕ್ಷ ಆರ್.ಎಸ್.ಪಾಟೀಲ್ ಆದೇಶ ಹೊರಡಿಸಿದ್ದಾರೆ.

ನೀಡಿ 14 ಬಂಡಾಯ ಅಭ್ಯರ್ಥಿಗಳನ್ನು ಪಕ್ಷದಿಂದ ಉಚ್ಛಾಟಿಸಿದ್ದಾರೆ. ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ 14 ಜನರು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ದಿಸಿದ್ದರು.

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಪ್ತ ರಾಜು ಸೇರಿ 14 ಜನರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಅ.28ರಂದು ವಿಜಯಪುರ ಪಾಲಿಕೆ ಚುನಾವಣೆ ನಡೆಯಲಿದೆ. 14 ಜನರಿಗೆ ಬಿಜೆಪಿ ಟಿಕೆಟ್ ಸಿಕ್ಕಿರಲಿಲ್ಲ. ಈ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧೆಗೆ ನಿರ್ಧರಿಸಿದ್ದರು.

Home add -Advt

ನಾನು ಮಹಿಳೆಯನ್ನು ಹೊಡೆದೇ ಇಲ್ಲ ಎಂದ ಸಚಿವ ವಿ.ಸೋಮಣ್ಣ

https://pragati.taskdun.com/politics/v-somannareactionwoman-beating-case/

Related Articles

Back to top button