Kannada NewsKarnataka NewsLatestPolitics

*ರೈತರಿಗೆ ಗುಡ್ ನ್ಯೂಸ್; ಪಂಪ್ ಸೆಟ್ ಗಳಿಗೆ ನಿತ್ಯ 5 ಗಂಟೆ ವಿದ್ಯುತ್ ಪೂರೈಸಲು ಸಿಎಂ ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಆಗಿದೆ. ಇದರಿಂದಾಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಹಾಗಾಗಿ ರೈತರ ಪಂಪ್ ಸೆಟ್ ಗಳಿಗೆ ಪ್ರತಿದಿನ ವಿದ್ಯುತ್ ಪೂರೈಸಲು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ವಿದ್ಯುತ್ ಸಮಸ್ಯೆಯಾಗಿರುವುದು ನಿಜ. ರೈತರ ಪಂಪ್ ಸೆಟ್ ಗಳಿಗೆ ಪ್ರತಿದಿನ 5 ಗಂಟೆ ವಿದ್ಯುತ್ ಪೂರೈಸಲು ಸೂಚಿಸಿದ್ದೇನೆ ಎಂದರು.

Home add -Advt

ರಾಜ್ಯದಲ್ಲಿ 2000 ಮೆಗಾವ್ಯಾಟ್ ವಿದ್ಯುತ್ ಕೊರತೆ ಇದೆ. ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಶೀಘ್ರವೇ ಕ್ರಮ ಕೈಗೊಳ್ಳುತ್ತೇವೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಾಗೂ ಕುಮಾರಸ್ವಾಮಿ ಆಡಳಿತದ ಅವಧಿಯಲ್ಲಿ ವಿದ್ಯುತ್ ಉತ್ಪಾದನೆ ಮಾಡಿಲ್ಲ, ಹೀಗಾಗಿ ವಿದ್ಯುತ್ ಸಮಸ್ಯೆ ಎದುರಾಗಿದೆ. ಹೊರಗಡೆಯಿಂದ ವಿದ್ಯುತ್ ಖರೀದಿ ಮಾಡಲು ಕೂಡ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ರೈತರಿಗೆ ಯಾವುದೆ ಸಮಸ್ಯೆ ಆಗಬಾರದು, ಅವರಿಗೆ ತೊಂದರೆಯಾಗದಂತೆ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಸೂಚಿಸಲಾಗಿದೆ ಎಂದು ಹೇಳಿದರು.


Related Articles

Back to top button