Latest

*ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ; ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ರಾಜಧಾನಿ ಬೆಂಗಳೂರು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮುಂದಿನ 24 ತಾಸುಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.

Home add -Advt

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲಿ ಭಾರಿ ಮಳೆಯಾಗಲಿದೆ.

ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ಬೆಳಗಾವಿ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಇನ್ನು ಕರಾವಳಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಮಾಹಿತಿ ನೀಡಿದೆ.

https://pragati.taskdun.com/siddaramaiahreactionbjp-manifesto/

Related Articles

Back to top button