Kannada NewsKarnataka NewsLatest
*ಗಣರಾಜ್ಯೋತ್ಸವ ಪರೇಡ್ ವೇಳೆ ಏಕಾಏಕಿ ಸಿಎಂ ಸಿದ್ದರಾಮಯ್ಯ ಬಳಿ ನುಗ್ಗಿದ ಅಪರಿಚಿತ ವ್ಯಕ್ತಿ*

ಪ್ರಗತಿವಾಹಿನಿ ಸುದ್ದಿ: 75ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಎಲ್ಲೆಡೆ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರು ಭಾಗಿಯಾಗಿದ್ದರು. ಧ್ವಜಾರೋಹಣದ ಬಳಿಕ ಪರೇಡ್ ಕಾರ್ಯಕ್ರಮದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಸಿಎಂ ಸಿದ್ದರಾಮಯ್ಯ ಬಳಿ ನುಗ್ಗಲು ಯತ್ನಿಸಿದ ಘಟನೆ ನಡೆದಿದೆ.
ತಕ್ಷಣ ಎಚ್ಚೆತ್ತ ಪೊಲೀಸರು ವ್ಯಕ್ತಿಯನ್ನು ತಡೆದಿದ್ದಾರೆ. ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ.
ಮೈಸೂರು ಮೂಲದ ಪರಶುರಾಮ್ ಎಂಬಾತ ಕರ ಪತ್ರವನ್ನು ಹಿಡಿದು ಸಿಎಂ ಬಳಿ ನುಗ್ಗಲು ಯತ್ನಿಸಿದ್ದಾನೆ. ಕೆಪಿಎಸ್ ಸಿ ಆರ್ಡರ್ ವಿಳಂಬವಾಗುತ್ತಿರುವುದಕ್ಕೆ ಮನವಿ ಸಲ್ಲಿಸಲು ಬಂದಿದ್ದ ಎನ್ನಲಾಗಿದೆ. ಆದರೆ ಆತನನ್ನು ಸಿಎಂ ಬಳಿ ತೆರಳಲು ಬಿಟ್ಟಿಲ್ಲ. ಹಾಗಾಗಿ ಏಕಾಏಕಿ ನುಗ್ಗಲು ಯತ್ನಿಸಿದ್ದಾನೆ ಎನ್ನಲಾಗಿದೆ.