Film & EntertainmentKannada NewsKarnataka NewsLatest

*ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಗೆ ಮತ್ತೊಂದು ಸಂಕಷ್ಟ: FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಬಿಗ್ ಬಾಸ್ ರಿಯಾಲಿಟಿ ಶೋನ ಮಾಜಿ ಸ್ಪರ್ಧಿ ರಜತ್ ಕಿಶನ್ ವಿರುದ್ಧ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ. ಸದಾಕಾಲ ವಿವಾದಗಳಿಂದಲೇ ಸುದ್ದಿಯಾಗುವ ರಜತ್, ಇದೀಗ ಮತ್ತೊಂದು ಕಿರಿಕ್ ಮಾಡಿಕೊಂಡಿದ್ದಾರೆ.

ಡಾಗ್ ಸತೀಶ್ ಜೊತೆ ಸ್ನೇಹ ಮಾಡಬಾರದು ಎಂದು ಕರೆ ಮಾಡಿ ಬೆದರಿಕೆ ಹಾಕಿದ ಆರೋಪದಲ್ಲಿ ಸಾಮಾಜಿಕ ಕಾರ್ಯಕರ್ತ ಗಿರೀಶ್ ಕುಮಾರ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಕೆ.ಆರ್.ಪುರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

Home add -Advt

ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನ ಮಾಜಿ ಸ್ಪರ್ಧಿ ರಜತ್ ಕಿಶನ್ ವಿವಾದ, ಕಿರಿಕ್ ಗಳಿಂದಲೇ ಹೆಚ್ಚು ಸುದ್ದಿಯಾಗುತ್ತಿದ್ದಾರೆ. ಇದೀಗ ರಜತ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಜತ್ ಕಿಶನ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಸಾಮಾಜಿಕ ಕಾರ್ಯಕರ್ತ ಗಿರೀಶ್ ಕುಮಾರ್ ಅವರಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಎಫ್​ಐಆರ್ ದಾಖಲಾಗಿದೆ. ಡಾಗ್ ಸತೀಶ್ ಜೊತೆ ಸ್ನೇಹ ಮಾಡಬಾರದು ಎಂದು ರಜತ್ ಕಿಶನ್ ಅವರು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಬೆದರಿಕೆ ಮತ್ತು ನಿಂದನೆ ಆರೋಪದ ಮೇಲೆ ದೂರು ದಾಖಲಾಗಿದೆ. ಗಿರೀಶ್ ಕುಮಾರ್ ಅವರಿಗೆ ರಜತ್ ಕಿಶನ್ ಅವರು ವಾಯ್ಸ್ ನೋಟ್ ಮೂಲಕ ಬೆದರಿಕೆ ಸಂದೇಶ ಕಳಿಸಿದ್ದಾರೆ. ಅಲ್ಲದೇ, ಕಾನ್ಫರೆನ್ಸ್ ಕಾಲ್​ನಲ್ಲಿ ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಜತ್ ಕಿಶನ್ ಹಾಗೂ ಕಿರಣ್ ವಿರುದ್ಧ ಬಿಎನ್ ಎಸ್ ಕಾಯ್ದೆ 351(2), 352 ಸೆಕ್ಷನ್ ಅಡಿ ಕೇಸ್ ದಾಖಲಾಗಿದೆ.

Related Articles

Back to top button