Kannada NewsKarnataka NewsLatest

*KSRTC ಬಸ್ – ಬೈಕ್ ಅಪಘಾತ; ತಾಯಿ ಹಾಗೂ ಮಗಳು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಆರ್.ಟಿ.ಸಿ ಬಸ್ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದ ತಾಯಿ ಹಾಗೂ ಮಗಳ ಮೇಲೆಯೇ ಬಸ್ ಹರಿದು ಇಬ್ಬರೂ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿಯಲ್ಲಿ ನಡೆದಿದೆ.

ಸವಿತಾ ಆಚಾರಿ (40) ಹಾಗೂ ಅಂಕಿತಾ ಆಚಾರಿ (17) ಮೃತ ದುರ್ದೈವಿಗಳು. ಸ್ಕೂಟಿಯಲ್ಲಿ ತೆರಳುತ್ತಿದ್ದ ತಾಯಿ-ಮಗಳಿಗೆ ಮಂಗಳೂರಿನಿಂದ ಬೆಳಗಾವಿಯತ್ತ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ತಾಯಿ-ಮಗಳು ಕೆಳಗೆ ಬಿದ್ದಿದ್ದು, ಬಸ್ ಚಕ್ರಕ್ಕೆ ಸಿಲುಕಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ತಾಯಿ-ಮಗಳನ್ನು ಭಟ್ಕಳದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Home add -Advt

ಆದರೆ ಚಿಕಿತ್ಸೆ ಫಲಕಾರಿಯಾಗದೇ ತಾಯಿ-ಮಗಳು ಸಾವನ್ನಪ್ಪಿದ್ದಾರೆ. ಮಂಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Related Articles

Back to top button