Kannada NewsKarnataka News

ಚಿಕ್ಕೋಡಿ-ಸದಲಗಾ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗೆ ಚಾಲನೆ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ – ಚಿಕ್ಕೋಡಿ -ಸದಲಗಾ ಮತ ಕ್ಷೇತ್ರದ ಕಲ್ಲೋಳ ಗ್ರಾಮದ ರಸ್ತೆ ಅಭಿವೃದ್ಧಿಗೆ ಶಾಸಕ ಗಣೇಶ ಹುಕ್ಕೇರಿ ಚಾಲನೆ ನೀಡಿದರು.

ಕಲ್ಲೋಳ ಗ್ರಾಮದ ಎಸ್ ಸಿ ಕಾಲನಿಗಳಲ್ಲಿ ಪೇವರ್ ಬ್ಲಾಕ್, ಸಿಸಿ ರಸ್ತೆ, ಚರಂಡಿ ನಿರ್ಮಾಣ, ಡಾಂಬರ್ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಪೂಜೆ ನೆರವೇರಿಸಲಾಯಿತು.

Home add -Advt

ಈ ಕಾಮಗಾರಿಗಳಿಗೆ ಶಾಸಕ ಗಣೇಶ ಹುಕ್ಕೇರಿ ಅವರ ಪ್ರಯತ್ನದಿಂದ ಲೋಕೋಪಯೋಗಿ ಇಲಾಖೆಯಿಂದ 52.97 ಲಕ್ಷ ರೂ. ಮಂಜೂರಾಗಿದೆ.

ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಿರಂತರವಾಗಿ ನಡೆಯುತ್ತಿವೆ. ಸರಕಾರ ಯಾವುದೇ ಇದ್ದರೂ ವಿವಿಧ ಇಲಾಖೆಗಳಿಂದ ಅನುದಾನ ತರಲಾಗುತ್ತಿದೆ. ಸಾರ್ವಜನಿಕರಿಗೆ ಉಪಯೋಗವಾಗುವ ಎಲ್ಲ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಗಣೇಶ ಹುಕ್ಕೇರಿ ಈ ಸಂದರ್ಭದಲ್ಲಿ ತಿಳಿಸಿದರು.

ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು, ಕಾರ್ಯಕರ್ತರು ಈ ಸಂದರ್ಭದಲ್ಲಿ ಇದ್ದರು.

Related Articles

Back to top button