Latest

ಪ್ರತಿಭಟನಾನಿರತರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್; ಲಾಠಿ ಏಟಿಗೆ ವಿದ್ಯಾರ್ಥಿನಿ ತಲೆಯಿಂದ ಸುರಿದ ರಕ್ತ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿವಿಧ ಸಮಸ್ಯೆ ಸರಿಪಡಿಸುವಂತೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿ ಚಾರ್ಜ್ ವೇಳೆ ವಿದ್ಯಾರ್ಥಿಯೋರ್ವಳ ತಲೆಗೆ ಬಿದ್ದ ಲಾಠಿ ಏಣಿನ ಪರಿಣಾಮ ತಲೆಯಿಂದ ರಕ್ತಚಿಮ್ಮಿದ್ದು, ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು ವಿಶ್ವವಿದ್ಯಾಲಯದ ಅವ್ಯವಸ್ಥೆ, ಹಾಸ್ಟೇಲ್ ಸಮಸ್ಯೆ, ವಿದ್ಯಾರ್ಥಿ ವೇತನ ಸೇರಿದಂತೆ ಹಲವು ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ವಿಶ್ವವಿದ್ಯಾಲಯದ ಎದುರು ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ವಿದ್ಯಾರ್ಥಿಗಳು ವಿವಿ ಮುತ್ತಿಗೆ ಹಾಕಲು ಮುಂದಾಗಿದ್ದಾರೆ.

Home add -Advt

ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸರು ಮನಸೋ ಇಚ್ಛೆ ಲಾಠಿ ಚಾರ್ಜ್ ಮಾಡಿದ್ದಾರೆ. ಹಲವು ವಿದ್ಯಾರ್ಥಿಗಳು ಲಾಠಿ ಏಟಿಗೆ ಹಲವು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಓರ್ವ ವಿದ್ಯಾರ್ಥಿನಿ ತಲೆಗೆ ಬಲವಾಗಿ ಪೆಟ್ಟುಬಿದ್ದಿದೆ.

ತಲೆಯಿಂದ ರಕ್ತ ಸುರಿಯುತ್ತಿದ್ದು, ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿನಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುತೂಹಲ ಮೂಡಿಸಿದ ಸಚಿವ ಆನಂದ್ ಸಿಂಗ್-ಡಿಕೆ.ಶಿವಕುಮಾರ್ ಭೇಟಿ

Related Articles

Back to top button