Latest

ಒಂದೇ ದಿನದಲ್ಲಿ 1,52,879 ಕೋವಿಡ್ ಕೇಸ್ ಪತ್ತೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 1,52,879 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,33,58,805ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 839 ಜನರು ಕೋವಿಡ್ ಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,69,275ಕ್ಕೆ ಏರಿಕೆಯಾಗಿದೆ.

Home add -Advt

ಇನ್ನು ದೇಶದಲ್ಲಿ 11,08,087 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,20,81,443 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 90,584 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆ ಒಂದೇ ದಿನದಲ್ಲಿ 14,12,047 ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 25,66,26,850 ಜನರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ದೇಶದಲ್ಲಿ ಈವರೆಗೆ 10,15,95,147 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

 

Related Articles

Back to top button