Kannada NewsKarnataka NewsLatest

*ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛತೆ; ಮುಖ್ಯಶಿಕ್ಷಕಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೋಲಾರದ ಮೊರಾರ್ಜಿ ದೇಸಾಯಿ ಶಾಲೆ ಬಳಿಕ ಬೆಂಗಳೂರಿನ ಪೀಣ್ಯದ ಅಂದ್ರಹಳ್ಳಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಇದೀಗ ಈ ಪ್ರಕರಣ ಸಂಬಂಧ ಮುಖ್ಯಶಿಕ್ಷಕಿಯನ್ನು ಪೊಲೀಸರು ಬಂಧಿಸಿದ್ದಾರೆ.

ಲಕ್ಷ್ಮೀ ದೇವಮ್ಮ ಬಂಧಿತ ಮುಖ್ಯಶಿಕ್ಷಕಿ. ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ ಪ್ರಕರಣ ಸಂಬಂಧ ಬಿಇಒ ಆಂಜಿನಪ್ಪ ಮುಖ್ಯಶಿಕ್ಷಕಿ ಲಕ್ಷ್ಮೀ ದೇವಮ್ಮ ಅವರನ್ನು ಅಮಾನತು ಮಾಡಿದ್ದರು. ಅಲ್ಲದೇ ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

Home add -Advt

ಇದೀಗ ಪೊಲೀಸರು ಮುಖ್ಯಶಿಕ್ಷಕಿಯನ್ನು ಬಂಧಿಸಿದ್ದಾರೆ. ಮುಖ್ಯಶಿಕ್ಷಕಿ ಲಕ್ಷ್ಮೀ ದೇವಮ್ಮ ಅವರನ್ನು ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.


Related Articles

Back to top button