Kannada NewsLatestNational

*ನದಿಯಲ್ಲಿ ಕೊಚ್ಚಿ ಹೋದ ಟ್ರ್ಯಾಕ್ಟರ್: 10 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಉತ್ತರಾಖಂಡದಲ್ಲಿ ಮತ್ತೆ ಮಳೆಯ ಆರ್ಭಟ ಹೆಚ್ಚಾಗಿದೆ. ಭಾರಿ ಮಳೆ ನಡುವೆ ಟ್ರ್ಯಾಕ್ಟರ್ ಒಂದು ನದಿಗೆ ಬಿದ್ದು ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ.

ಟನ್ಸ್ ನದಿಯಲ್ಲಿ ಈ ಗಹ್ಟನೆ ನಡೆದಿದೆ. ಕಾರ್ಮಿಕರಿದ್ದ ಟ್ರ್ಯಾಕ್ಟರ್ ನದಿಗೆ ಬಿದ್ದು, ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. 10 ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಉತ್ತರಾಖಂಡದ ಡೆಹ್ರಾಡೂನ್ ನಲ್ಲಿ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮಳೆ ನಡುವೆಯೇ ನದಿ ದಾಟುವ ವೇಳೆ ಟ್ರ್ಯಾಕ್ಟರ್ ಕೊಚ್ಚಿ ಹೋಗಿದೆ.

Home add -Advt


Related Articles

Back to top button