LatestUncategorized

*ಇಂದೇ ಬಿಡುಗಡೆಯಾಗಲಿದೆ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ವಿಧಾನಸಭಾ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಗೆ ತಯಾರಿ ನಡೆಸಿದ್ದು, ಕೆಲ ಹೊತ್ತಲ್ಲೇ ಅಭ್ಯರ್ಥಿಗಳ 2ನೇ ಪಟ್ಟಿ ಘೋಷಣೆಯಾಗಲಿದೆ.

Home add -Advt

ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ಮುಕ್ತಾಯವಾಗಿದ್ದು, ಸಭೆ ಬಳಿಕ ಸುದ್ದಿಗರರೊಂದಿಗೆ ಮಾತನಾಡಿದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಇಂದೇ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಯಾಗಲಿದೆ. 40 ಕ್ಷೇತ್ರಗಳಿಗೆ 2ನೇ ಪಟ್ಟಿಯಲ್ಲಿ ಅಭ್ಯರ್ಥಿಗಳ ಹೆಸರು ಫೈನಲ್ ಮಾಡಲಾಗಿದೆ ಎಂದರು.

ಈಗ ಮತ್ತೊಂದು ಸುತ್ತಿನ ಸಭೆ ನಡೆಯಲಿದ್ದು, ಸಭೆ ಬಳಿಕ ತಡರಾತ್ರಿ ವೇಳೆಗೆ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಲಾಗುವುದು. ಉಳಿದ ಕ್ಷೇತ್ರಗಳಿಗೂ ಶೀಘ್ರದಲ್ಲಿಯೇ ಅಭ್ಯರ್ಥಿಗಳನ್ನು ಪ್ರಕಟಿಸಲಾಗುವುದು. ಈ ನಿಟ್ಟಿನಲ್ಲಿಯೂ ಸಿದ್ಧತೆ ನಡೆದಿದೆ ಎಂದು ತಿಳಿಸಿದರು.

ದೆಹಲಿಯಲ್ಲಿ ನಡೆದ ಎಐಸಿಸಿ ಚುನಾವಣೆ ಸಮಿತಿ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತಿತರರು ಭಾಗವಹಿಸಿದ್ದರು.

https://pragati.taskdun.com/cm-basavaraj-bommaireactionsiddaramaihstatment/
https://pragati.taskdun.com/banjara-swamijisuicide-attemptreservationprotest/

Related Articles

Back to top button