CrimeKannada NewsKarnataka NewsLatest

*ಬೆಳಗಾವಿಯಲ್ಲಿ ಮತ್ತೊಂದು ಹತ್ಯೆ: ಪತ್ನಿಯನ್ನೇ ಕೊಲೆಗೈದು ಹೃದಯಾಘಾತವೆಂದು ಕಥೆ ಕಟ್ಟಿದ ಪತಿ*

ಪ್ರಗತಿವಾಹಿನಿ ಸುದ್ದಿ: ಪತಿ ಮಹಾಶಯನೊಬ್ಬ ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆಗೈದು ಬಳಿಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾಗಿ ಕಥೆ ಕಟ್ಟಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಗಿನಹಾಳದಲ್ಲಿ ಈ ಘಟನೆ ನಡೆದಿದೆ. ರಾಜೇಶ್ವರಿ (21) ಕೊಲೆಯಾದ ಮಹಿಳೆ. ಫಕೀರಪ್ಪ ಗಿಲಕ್ಕನವರ್ ಪತ್ನಿಯನ್ನೇ ಕೊಂದ ಪತಿ.

ಮದುವೆಯಾಗಿ ಮೂರು ವರ್ಷವಾದರೂ ಮಕ್ಕಳಾಗಿಲ್ಲ ಎಂದು ಪತ್ನಿ ಕಾಟಕೊಡುತ್ತಿದ್ದಳಂತೆ. ಇದರಿಂದ ಸಿಟ್ಟಿಗೆದ್ದು ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದ ಫಕೀರಪ್ಪ, ಬಳಿಕ ಪತ್ನಿಯ ಸಂಬಂಧಿಕರಿಗೆ ಕರೆ ಮಾಡಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎಂದು ಕಥೆ ಕಟ್ಟಿದ್ದಾನೆ.

ಅಂತ್ಯಸಂಸ್ಕಾರದ ವೇಳೆ ರಾಜೇಶ್ವರಿ ಪೋಷಕರಿಗೆ ಅನುಮಾನ ಬಂದಿದೆ. ಮೃತದೇಹದ ಕತ್ತಿನ ಭಾಗದಲ್ಲಿ ಗಾಯದ ಗುರುತು ಪತ್ತೆಯಾಗಿದೆ. ತಕ್ಷಣ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ವೇಳೆ ಆರೋಪಿ ಫಕೀರಪ್ಪನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ತಾನೇ ಪತ್ನಿಯನ್ನು ಕೊಂದಿದ್ದಾಗಿ ಬಾಯ್ಬಿಟ್ಟಿದ್ದಾನೆ. ಬೈಲಹೊಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button