Belagavi NewsBelgaum News

*ಬೆಳಗಾವಿಯಲ್ಲಿ ಬಾಲಕಿ ಮೇಲೆ 3 ಬೀದಿನಾಯಿಗಳ ದಾಳಿ*

ಪ್ರಗತಿವಾಹಿನಿ ಸುದ್ದಿ: ಪುಟ್ಟ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ ನಡೆಸಿರುವ ಘಟನೆ ಬೆಳಗಾವಿಯ ಗಣೇಶಪುರದಲ್ಲಿ ನಡೆದಿದೆ.

5 ವರ್ಷದ ಪ್ರಾವಿಣ್ಯಾ ಬೀದಿನಾಯಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಮಗು. ಮೂರು ಬೀದಿನಾಯಿಗಳು ಬಾಲಕಿ ಮೇಲೆ ದಾಳಿ ನಡೆಸಿ, ಬಾಲಕಿಯ ಹೊಟ್ಟೆ, ಬೆನ್ನು, ಕಾಲುಗಳಿಗೆ ಕಚ್ಚಿ ಗಾಯಗೊಳಿಸಿವೆ.

ಗಾಯಾಳು ಬಾಲಕಿಯನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದು ದಿನದ ಹಿಂದಷ್ಟೇ ಗಣೇಶಪುರದಲ್ಲಿಯೇ ಬಾಲಕನ ಮೇಲು ಬೀದಿನಾಯಿಗಳು ದಾಳಿ ನಡೆಸಿದ್ದವು. ಬೀದಿನಾಯಿಗಳು ದಾಳಿ ನಡೆಸುತ್ತಿದ್ದರೂ ಪಾಲಿಕೆ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button