ರಾಜ್ಯದ ಹಲವೆಡೆ ಇಂದಿನಿಂದ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯದ ಕರಾವಳಿಯಲ್ಲಿ ಇಂದಿನಿಂದ ಸತತ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನಲ್ಲೂ ಇಂದು ಮಳೆಯಾಗುವ ಮುನ್ಸೂಚನೆ ನೀಡಿದ್ದು ರಾಜಧಾನಿ ಬೆಂಗಳೂರಿನಲ್ಲೂ ಇಂದು ಮೋಡ ಕವಿದ ವಾತಾವರಣವಿದ್ದು ಮಧ್ಯಾಹ್ನದ ನಂತರ ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ ಬಗ್ಗೆ ತಿಳಿಸಿದೆ.

Home add -Advt

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ತುಮಕೂರು, ದಾವಣಗೆರೆ, ಮಂಡ್ಯ, ಮೈಸೂರು, ಹಾಸನ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಮೊದಲ ಮೂರು ದಿನ ಸಾಧಾರಣ ಮಳೆ ಆರಂಭವಾಗಲಿದೆ.

ಮುಂದಿನ ಐದು ದಿನಗಳ ಪೈಕಿ ಕೊನೆಯ ಎರಡು ದಿನ ಈ ಜಿಲ್ಲೆಗಳಲ್ಲಿ ಕೊನೆಯ ಎರಡು ದಿನ ವ್ಯಾಪಕ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ವೇಳೆ ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗದ ಜಿಲ್ಲೆಗಳಲ್ಲಿ ಮಳೆ ಸುರಿಸುವ ಮಾರುತಗಳು ಸಕ್ರಿಯವಾಗಿರಲಿವೆ ಎಂದು ಸಹ ಎಂದು ಮಾಹಿತಿ ನೀಡಿದೆ.

https://pragati.taskdun.com/only-10-ministers-sworn-in-in-first-phase/
https://pragati.taskdun.com/dr-bhujanga-shetty-of-narayana-nethralaya-passed-away/
https://pragati.taskdun.com/police-crack-marihala-murder-case-two-arrested/

Related Articles

Back to top button