Latest

*ರಾಜ್ಯದಲ್ಲಿ ಮತ್ತೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ಮತ್ತೆ ಮಳೆ ರಗಳೆ ಮುನ್ಸೂಚನೆ ದೊರೆತಿದೆ. ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಎಫೆಕ್ಟ್ ಕರ್ನಾಟಕದ ಮೇಲೂ ಬೀಳಲಿದೆ.

ನವೆಂಬರ್ 29 ರಿಂದ ಡಿಸೆಂಬರ್ 3 ರವರೆಗೆ ವಿವಿಧೆಡೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ದಕ್ಷಿಣ ಒಳನಾಡು, ಕರಾವಳಿ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಿಡಿಲು ಸಹಿತ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ ಆಗಲಿದೆ. ಡಿಸೆಂಬರ್ 2, 3 & 5 ರಂದು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿದೆ.

Home add -Advt

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎನ್ನಲಾಗಿದೆ.

Related Articles

Back to top button