Kannada NewsLatest

ರಾಜ್ಯ ಹಾಗೂ ಭಾಷೆಗಳು ಅಡಚಣೆ ಆಗಬಾರದು: ಶಿವಸೇನೆಗೆ ಸಿಎಂ ತಿರುಗೇಟು

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಜನಸಂಕಲ್ಪ ಯಾತ್ರೆಯ ಸಂದರ್ಭದಲ್ಲಿಯೇ ನವದೆಹಲಿಗೆ ಭೇಟಿ ನೀಡಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಬೆಳಗಾವಿಯ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಬೆಳಗಾವಿಗೆ ಶುಭ ಸುದ್ದಿ ಇದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ನಿರ್ಣಯ ಕೈಗೊಂಡಾಗ ಎಲ್ಲರಿಗೂ ತಿಳಿಸಲಾಗುವುದು ಎಂದು ತಿಳಿಸಿದರು.

Home add -Advt

ರಾಜ್ಯ ಹಾಗೂ ಭಾಷೆಗಳು ಅಡಚಣೆ ಆಗಬಾರದು :

ಕೊಲ್ಲಾಪುರದ ಕನೇರಿ ಮಠದಲ್ಲಿ ಕನ್ನಡ ಭವನ ಕಟ್ಟಲು ಶಿವಸೇನೆಯವರು ವಿರೋಧಿಸುತ್ತಿರುವ ಬಗ್ಗೆ ಪ್ರತಿಕ್ರಯಿಸಿ, ಈಗಾಗಲೇ ಮಹಾರಾಷ್ಟ್ರದಲ್ಲಿ ಹತ್ತು ಹಲವಾರು ಸಂಘಗಳ ಕನ್ನಡ ಭವನಗಳು ಇವೆ. ಹಲವಾರು ದೇವಸ್ಥಾನಗಳು, ಯಾತ್ರಿನಿವಾಸಗಳೂ ಇವೆ. ಈ ವಿಚಾರದಲ್ಲಿ ರಾಜ್ಯ ಹಾಗೂ ಭಾಷೆಗಳು ಅಡಚಣೆ ಆಗಬಾರದು ಎಂಬುದು ನನ್ನ ಅನಿಸಿಕೆ ಎಂದರು.

ಮಹಾರಾಷ್ಟ್ರದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ ಶಿವಸೇನೆ ಕ್ಯಾತೆ

https://pragati.taskdun.com/politics/maharashtrakarnataka-bhawanashivasene-oppose/

Related Articles

Back to top button