Uncategorized

*ಬೆಳಗಾವಿ: ಸಿಲಿಂಡರ್ ಸೋರಿಕೆಯಿಂದ ಹೊತ್ತಿಕೊಂಡ ಬೆಂಕಿ; ಮನೆಯಲ್ಲಿದ್ದ ನಾಲ್ವರಿಗೆ ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಮನೆಯಲ್ಲಿ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಪತಿ-ಪತ್ನಿ, ಮಕ್ಕಳು ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಇಲ್ಲಿನ ಸುಭಾಷ್ ಬಡಾವಣೆಯ ಮನೆಯಲ್ಲಿ ಘಟನೆ ನಡೆದಿದೆ. ಚಹಾ ಮಾಡಲೆಂದು ಲೈಟರ್ ಹಚ್ಚುತ್ತಿದ್ದಂತೆ ಸಿಲಿಂಡರ್ ಗೆ ಬೆಂಕಿ ಬಿದ್ದು ಹೊತ್ತಿ ಉರಿದಿದೆ. ಘಟನೆಯಲ್ಲಿ NWKSRTC ನೌಕರ ಮಂಜುನಾಥ್, ಪತ್ನಿ ಲಕ್ಷ್ಮೀ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಕ್ಕಳಾದ ವೈಷ್ಣವಿ (13), ಸಾಯಿಪ್ರಸಾದ್ (10)ಗೆ ಸಣ್ಣ ಪುಟ್ಟಗಾಯಗಳಾಗಿವೆ.

Home add -Advt

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಮಾಳಮಾರುತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Related Articles

Back to top button