Election NewsLatestPolitics

*ಬಾಗಲಕೋಟೆ: ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ*

ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ

ಪ್ರಗತಿವಾಹಿನಿ ಸುದ್ದಿ: ಬಾಗಲಕೋಟೆ ಉಪಚುನಾವಣೆಯ ಫಲಿತಾಂಶ ಬಹುತೇಕ ಫೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭಾರಿ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

Home add -Advt

ಬಾಗಲಕೋಟೆ ಉಪಚುನಾವಣೆಯ 20 ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ವೀರಣ್ಣ ಚಿರಂತಿ ಮಠ ಹಿನ್ನಡೆಯಲ್ಲಿದ್ದು, ಸೋಲನಬುವಸಿದ್ದಾರೆ.

ಉಮೇಶ್ ಮೇಟಿ ಮೊದಲ ಬಾರಿ ಉಪಚುನಾವಣೆಗೆ ಸ್ಪರ್ಧಿಸಿದ್ದು, ಮೊದಲ ಸ್ಪರ್ಧೆಯಲ್ಲಿಯೇ ಗೆದ್ದು ಬೀಗಿದ್ದಾರೆ. ಆರಂಭಿಕ ಹಂತದಿಂದಲೂ ಉಮೇಶ್ ಮೇಟಿ ಮುನ್ನಡೆ ಕಾಯ್ದುಕೊಂಡಿದ್ದರು. ಸದ್ಯ ಬಾಗಲಕೋಟೆಯಲ್ಲಿ ಕಾಂಗ್ರೆಸ್ ನ ಉಮೇಶ್ ಮೇಟಿ ಗೆದ್ದು ಬೀಗಿದ್ದಾರೆ.

ಸದ್ಯದ ಮಾಹಿತಿ ಪ್ರಕಾರ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ 83,455 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದರೆ, ಬಿಜೆಪಿಯ ವೀರಣ್ಣ ಚಿರಂತಿಮಠ 66,984 ಮತಗಳನ್ನು ಪಡೆದು ಹಿನ್ನಡೆಯಲ್ಲಿದ್ದಾರೆ.

ಉಮೇಶ್ ಮೇಟಿ ಗೆಲುವು ಖಚಿತವಾಗುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ.

Related Articles

Back to top button