Latest

8 ತಿಂಗಳ ಮಗುವಿನೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ತಾಯಿ

ಪ್ರಗತಿವಾಹಿನಿ ಸುದ್ದಿ; ಮೈಸೂರು: 8 ತಿಂಗಳ ಮಗುವಿನೊಂದಿಗೆ ತಾಯಿ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನ ದಾಸನೂರು ಗ್ರಾಮದಲ್ಲಿ ನಡೆದಿದೆ.

24 ವರ್ಷ ಸಿಂಧು ಎಂಬ ಮಹಿಳೆ ತನ್ನ 8 ತಿಂಗಳ ಹಸುಗೂಸಿನೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಚಾಮರಾಜನಗರ ಜಿಲ್ಲೆಯ ಸಿಂಧು ದಾಸನೂರಿನ ಮಹದೇವಸ್ವಾಮಿ ಎಂಬುವವರನ್ನು ವಿವಾಹವಾಗಿದ್ದರು. ಆದರೆ ಈ ದಂಪತಿಗೆ ಹಲವು ವರ್ಷಗಳಿಂದ ಮಕ್ಕಳಿರಲಿಲ್ಲ. ನಾಲ್ಕಾರು ಬಾರಿ ಸಿಂಧುಗೆ ಗರ್ಭಪಾತವಾಗಿತ್ತು. ಕಳೆದ ವರ್ಷ ಗಂಡು ಮಗುವಿಗೆ ಸಿಂಧು ಜನ್ಮ ನೀಡಿದ್ದಳು. ಬಾಣಂತನದ ಬೆನ್ನಲ್ಲೇ ಸಿಂಧು ಖಿನ್ನತೆಗೆ ಒಳಗಾಗಿದ್ದಳು.

Home add -Advt

ನಿನ್ನೆ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಗು ಸಮೇತ ತಾನು ಬೆಂಕಿ ಹಚ್ಚಿಕೊಂಡಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಅಕ್ಕಪಕ್ಕದವರು ತಾಯಿ ಮಗುವನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ಇಬ್ಬರು ಸಾವನ್ನಪ್ಪಿದ್ದಾರೆ.
ಮೆಟ್ಟಿಲುಗಳ ಮೇಲೆ ಕುಸಿದುಬಿದ್ದ ಗಾಯಕ ಸಾವು

Related Articles

Back to top button