Latest

*ಶಿವಮೊಗ್ಗ ಏರ್ ಪೋರ್ಟ್ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಶಿವಮೊಗ್ಗದಲ್ಲಿ ನಿರ್ಮಾಣ ಮಾಡಲಾಗಿರುವ ನೂತನ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದ್ದಾರೆ.

ಶಿವಮೊಗ್ಗದ ಸೋಗಾನೆಯಲ್ಲಿ 450 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ಏರ್ ಪೋರ್ಟ್ ಗೆ ಪ್ರಧಾನಿ ಮೋದಿ ಚಾಲನೆ ನೀಡಿದರು. ಈ ಏರ್ ಪೋರ್ಟ್ ರಾಜ್ಯದ ಎರಡನೇ ಅತಿ ದೊಡ್ಡ ರನ್ ವೇಯನ್ನು ಹೊಂದಿದ್ದು, 3200 ಕಿ.ಮೀ ರನ್ ವೇ ಹೊಂದಿದೆ.

ಇದೇ ವೇಳೆ ಶಿವಮೊಗ್ಗ ವಿವಿಧ ಅಭಿವೃದ್ಧಿ ಕಾಮಗಾರಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ಸ್ಮಾರ್ಟ್ ಸಿಟಿ ಕಮಗಾರಿ, ಶಿಮುಲ್ ಹಾಲು ಪ್ಯಾಕಿಂಗ್ ಘಟಕ, ಮಾಮ್ ಕೋಸ್ ಆಡಳಿತ ಭವನ, ಶಿವಮೊಗ್ಗ-ಶಿಕಾರಿಪುರ- ರಾಣೇಬೆನ್ನೂರು ಹೊಸ ರೈಲು ಮಾರ್ಗಕ್ಕೆ ಚಾಲನೆ ಹಾಗೂ ಕೋಟೆ ಗಂಗೂರು ರೈಲ್ವೆ ಕೋಚಿಂಗ್ ಡಿಪೋಗೆ ಶಿಲಾನ್ಯಾಸ ಮಾಡಿದರು.

*ಶಿವಮೊಗ್ಗ ನೂತನ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿ*

Home add -Advt

https://pragati.taskdun.com/shivamogga-airportpm-narendra-modientry/

Related Articles

Back to top button