ಪ್ರಗತಿವಾಹಿನಿ ಸುದ್ದಿ, ನವದೆಹಲಿ
ಈ ಬಾರಿ ಚುನಾವಣೆಯಲ್ಲಿ ಆಯೋಗವು ಒಟ್ಟು 3,493 ಕೋಟಿ ಹಣವನ್ನು ವಶಕ್ಕೆ ಪಡೆದಿದೆ.
ಅಪಾರ ಪ್ರಮಾಣದಲ್ಲಿ ಅಕ್ರಮ ನಗದು, ಮದ್ಯ ಹಾಗೂ ಇನ್ನಿತರ ಬೆಲೆ ಬಾಳುವ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಆಯೋಗ ತಿಳಿಸಿದೆ.
ಅಕ್ರಮ ನಗದು ಹಣ ಜಪ್ತಿಯಲ್ಲಿ ತಮಿಳುನಾಡು ಮುಂದಿದೆ. ಈ ರಾಜ್ಯದಲ್ಲಿ ಒಟ್ಟಾರೆ, 950 ಕೋಟಿ ಅಕ್ರಮ ನಗದು ಹಣವನ್ನು ವಶಕ್ಕೆ ಪಡೆಯಲಾಗಿದೆ. ಗುಜರಾತಿನಲ್ಲಿ 552 ಕೋಟಿ ಹಣವನ್ನು ಜಪ್ತಿ ಮಾಡಲಾಗಿದೆ. ದೆಹಲಿಯಲ್ಲಿ 426 ಕೋಟಿ ಹಣವನ್ನು ಚುನಾವಣಾ ಆಯೋಗ ವಶಕ್ಕೆ ಪಡೆದಿದೆ.