Kannada NewsKarnataka NewsLatestPolitics
*ನಾಳೆಯೇ ಸಚಿವ ಸಂಪುಟ ವಿಸ್ತರಣೆ?*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಬಹು ನಿರೀಕ್ಷಿತ ರಾಜ್ಯ ಸಚಿವ ಸಂಪುಟ ವಿಸ್ತರಣೆ ಬುಧವಾರವೇ ನಡೆಯುವ ಸಾಧ್ಯತೆ ಇದೆ.
ಇಂದು ಬೆಳಗ್ಗೆ ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ ಅವರು ಹೈಕಮಾಂಡ್ ಜೊತೆ ಚರ್ಚೆ ನಡೆಸುತ್ತಿದ್ದು, ಇಂದು ಸಂಜೆಯೊಳಗಾಗಿ ಅಂತಿಮ ಪಟ್ಟಿ ಹೊರಬೀಳಲಿದೆ.
ನಾಳೆಯೇ ಸಂಪುಟ ವಿಸ್ತರಣೆಗೆ ಸಿದ್ಧತೆ ನಡೆದಿದ್ದು, ಲೋಕಭವನಕ್ಕೆ ಅನೌಪಚಾರಿಕ ಮಾಹಿತಿ ಹೋಗಿರುವುದಾಗಿ ಗೊತ್ತಾಗಿದೆ. ಅಧಿಕಾರಿಗಳ ವಲಯದಲ್ಲೂ ಭಿರುಸಿನ ಚಟುವಟಿಕೆ ನಡೆಯುತ್ತಿದೆ.
ಇಇಂದು ಸಂಜೆಯ ಹೊತ್ತಿಗೆ ಈ ಬಗ್ಗೆ ಸ್ಪಷ್ಟ ಮಾಹಿತಿ ಸಿಗಲಿದೆ.




