Karnataka NewsLatest

*ಐಶ್ವರ್ಯಾ ಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು*

ಪ್ರಗತಿವಾಹಿನಿ ಸುದ್ದಿ: ಚಿನ್ನ ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಐಶ್ವರ್ಯಾ ಗೌಡಗೆ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

Home add -Advt

ಡಿ.ಕೆ.ಸುರೇಶ್ ಸಹೋದರಿ ಎಂದು ಹೇಳಿಕೊಂಡು ಚಿನ್ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಐಶ್ವರ್ಯಾ ಗೌಡಗೆ ಬಿಗ್ ರಿಲೀಫ್ ಸಿಕ್ಕಿದೆ. ಬೆಂಗಳೂರಿನ 1ನೇ ಸಿಸಿಹೆಚ್ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಅನುಸೂಚಿತ ಪ್ರಕರಣವಿಲ್ಲದಿದ್ದರೂ ಇಡಿ ಬಂಧನ ಮಾಡಿದೆ. ಮಹಿಳೆಗೆ ಬಂಧನದಿಂದ ವಿಶೇಷ ವಿನಾಯಿತಿ ಇದೆ ಎಂದು ಐಶ್ವರ್ಯಾ ಗೌಡ ಪರ ವಕೀಲರು ವಾದ ಮಂಡಿಸಿದ್ದರು. ಈ ಹಿನ್ನೆಲೆಯಲ್ಲಿ ಐಶ್ವರ್ಯ ಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ.

ಇದೇ ಪ್ರಕರಣದಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್ ಗೆ ಇಡಿ ಸಮನ್ಸ್ ಜಾರಿ ಮಾಡಿದೆ.

Related Articles

Back to top button