
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮೂರು ದಿನಗಳ ಹಿಂದೆ ಬಾಲಕನನ್ನು ಅಪಹರಿಸಿದ್ದ ದುಷ್ಕರ್ಮಿಗಳು ಇದೀಗ ಆತನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ಬೆಂಗಳೂರಿನ ದಕ್ಷಿಣ ತಾಲುಕಿನ ಶಿಕಾರಿಪಾಳ್ಯದ 10 ವರ್ಷದ ಬಾಲಕ ಮೊಹಮ್ಮದ್ ಆಸೀಫ್ ಎಂಬಾತನನ್ನು ಮುರು ದಿನಗಳ ಹಿಂದೆ ದುಷ್ಕರ್ಮಿಗಳು ಅಪಹರಿಸಿದ್ದರು. ಬಾಲಕನನ್ನು ಒತ್ತೆಯಾಗಿರಿಸಿಕೊಂಡು ಪೋಷಕರಿಗೆ ಕರೆ ಮಾಡಿ 25 ಲಕ್ಷ ರೂಪಾಯಿ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು. ಕೇಳಿದಷ್ಟು ಹಣ ನೀಡದಿದ್ದಲ್ಲಿ ಬಾಲಕನನ್ನು ಹತ್ಯೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದರು.
ಈ ಬಗ್ಗೆ ಬಾಲಕನ ಪೋಶಕರು ಹೆಬ್ಬಗೋಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶೋಧ ನಡೆಸಿದ್ದರು. ಆದರೆ ಇದೀಗ ದುಷ್ಕರ್ಮಿಗಳು ಬಾಲಕನನ್ನು ಭೀಕರವಾಗಿ ಹತ್ಯೆಗೈದಿದ್ದಾಗಿ ತಿಳಿದುಬಂದಿದೆ.
ಕೆರೆ ನೀರು ಕುಡಿದ್ರೆ ನಶೆ ಎರಬಹುದು ಹುಷಾರ್!