Karnataka News

*ನಗರಸಭೆ ಗುತ್ತಿಗೆ ನೌಕರ ಆತ್ಮಹತ್ಯೆಗೆ ಯತ್ನ*

ಪ್ರಗತಿವಾಹಿನಿ ಸುದ್ದಿ: ಸಂಬಳ ಕೊಟ್ಟಿಲ್ಲ ಎಂಬ ಕಾರಣಕ್ಕೆ ನಗರಸಭೆ ಗುತ್ತಿಗೆ ನೌಕರನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಯಚೂರಿನಲ್ಲಿ ನಡೆದಿದೆ.

ಅಫ್ಸರ್ ಅಲಿ ಅತ್ಮಹತ್ಯೆಗೆ ಯತ್ನಿಸಿದ ರಾಯಚೂರು ನಗರಸಭೆ ಗುತ್ತಿಗೆ ನೌಕರ. ಫಿನಾಯಿಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರಾಯಚೂರು ನಗರಸಭೆಯ ವಿದ್ಯುತ್ ನಿರ್ವಹಣಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ.

Home add -Advt

ಅಫ್ಸರ್ ಗೆ ಕಳೆದ 7 ತಿಂಗಳಿಂದ ಸಂಬಳ ಬಂದಿರಲಿಲ್ಲ. ಕಳೆದ 15 ವರ್ಷಗಳಿಂದ ಆತ ನಗರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ. ಸಂಬಳ ಬಂದಿಲ್ಲ ಎಂದು ಬೇಸತ್ತು ಅಪ್ಸರ್ ಆತ್ಮಹತ್ಯೆಗೆ ಯತ್ನಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಆತನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸದರಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Related Articles

Back to top button