EducationKannada NewsKarnataka NewsLatest

*ಇಂದು ಹಲವು ಕಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಇಂದು ನಿರ್ದಿಷ್ಟ ತಾಲೂಕುಗಳಲ್ಲಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿಸಲಾಗಿದೆ.

ಕೊಡಗಿನ ಸೋಮವಾರಪೇಟೆ, ಶಿವಮೊಗ್ಗ ಜಿಲ್ಲೆಯ ಸಾಗರ ಮತ್ತು ತೀರ್ಥಹಳ್ಳಿ ತಾಲೂಕಿನ ಎಲ್ಲಾ ಶಾಲೆಗಳಿಗೆ ಮಳೆಯ ಹಿನ್ನೆಲೆಯಲ್ಲಿ ರಜೆ ನೀಡಲಾಗಿದೆ. ಅಲ್ಲದೇ ಕೊಪ್ಪ ಶೃಂಗೇರಿ ತಾಲೂಕಿನ ಎಲ್ಲಾ ಶಾಲೆಗಳಿಗೂ ಸಹ ಇಂದು ರಜೆ ಘೋಷಿಸಲಾಗಿದೆ.

ಉತ್ತರಕನ್ನಡದ ಜೊಯಿಡಾ, ದಾಂಡೇಲಿ ತಾಲೂಕಿನ ಎಲ್ಲಾ ಶಾಲೆಗಳಿಗೂ ಸಹ ಇಂದು ರಜೆ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಸೇರಿದಂತೆ ಶಿವಮೊಗ್ಗ ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ಹಲವು ತಾಲೂಕುಗಳಲ್ಲಿ ಮಳೆಯ ಆರ್ಭಟ ತೀವ್ರಗೊಂಡಿದೆ. ನದಿಗಳು ಹಾಗೂ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button