Belagavi NewsBelgaum NewsKarnataka NewsPolitics

*ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೇಯೊಂದಿಗೆ ವಿಲೀನಗೊಳಿಸುವ ಬಗ್ಗೆ ಚಿಂತನೆ: ವಿ ಸೋಮಣ್ಣ*

ಪ್ರಗತಿವಾಹಿನಿ ಸುದ್ದಿ: ಕೊಂಕಣ ರೈಲ್ವೆ ಜಾಲವು ಕೇರಳದಿಂದ ಮಹಾರಾಷ್ಟ್ರದವರೆಗೆ ಹರಡಿಕೊಂಡಿದೆ‌. ಪ್ರಯಾಣಿಕರಿಗೆ ಹೆಚ್ಚಿನ ಉತ್ತಮ ಸೇವೆ ಒದಗಿಸುವ ನಿಟ್ಟಿನಲ್ಲಿ ನಾವು ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೇಯೊಂದಿಗೆ ವಿಲೀನಗೊಳಿಸುವ ಬಗ್ಗೆ ಯೋಚಿಸುತ್ತಿದ್ದೇವೆ ಎಂದು ಬೆಳಗಾವಿಯಲ್ಲಿ ರಾಜ್ಯ ರೈಲ್ವೆ ಖಾತೆಯ ಸಚಿವ ವಿ ಸೋಮಣ್ಣ ಹೇಳಿದ್ದಾರೆ.

ಕೊಂಕಣ ರೈಲ್ವೆ ಭಾರತೀಯ ರೈಲ್ವೆ ಬಗ್ಗೆ ವಿಲಿನಗೊಂಡರೆ ಜನರಿಗೆ ಉತ್ತಮ ಸೇವೆಗಳನ್ನು ನೀಡಲು ಅನೂಕಲು ಆಗಲಿದೆ. ಹಾಗಾಗಿ ಈಗಾಗಲೇ ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಕೊಂಕಣ ರೈಲ್ವೆವು ಕರ್ನಾಟಕ, ಕೇರಳ ಮತ್ತು ಗೋವಾ ಸರ್ಕಾರಗಳೊಂದಿಗೆ ಮಾತುಕತೆ ನಡೆಸಿದ್ದೇವೆ. ಮಹಾರಾಷ್ಟ್ರಕ್ಕೆ ಮನವರಿಕೆ ಮಾಡಿದ ಬಳಿಕ ವಿಲೀನ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಕೊಂಕಣ ರೈಲ್ವೆವು ಕರ್ನಾಟಕ ರಾಜ್ಯವೊಂದರಲ್ಲೇ ಒಟ್ಟು 742 ಕಿ.ಮೀ. ಕ್ರಮಿಸುತ್ತದೆ  ಪ್ರಯಾಣಿಕರಿಗೆ ಇನ್ನಷ್ಟು ಉತ್ತಮ ಸೇವೆಗಳನ್ನು ಒದಗಿಸುವ ಅಗತ್ಯವಿದೆ. ಹೀಗಾಗಿ ಭಾರತೀಯ ರೈಲ್ವೇಯೊಂದಿಗೆ ವಿಲೀನಗೊಳಿಸುವ ಬಗ್ಗೆ ಪರಿಗಣಿಸಲಾಗುತ್ತಿದೆ. ಈ ಹಿಂದೆ ರೈಲ್ವೆ ಇಲಾಖೆಯು ರಾಜ್ಯ ಸರ್ಕಾರದ ಶೇ. 50ರಷ್ಟು ಕೊಡುಗೆಯೊಂದಿಗೆ ರಾಜ್ಯದಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿತ್ತು, ಆದರೆ ಈಗ ರಾಜ್ಯ ಸರ್ಕಾರದಿಂದ ಯಾವುದೇ ಸಹಕಾರವಿಲ್ಲ ಎಂಬ ಕಾರಣಕ್ಕೆ ಎಲ್ಲಾ ವೆಚ್ಚವನ್ನು ಕೇಂದ್ರವೇ ಭರಿಸಲಿದೆ ಎಂದು ನಿರ್ಧರಿಸಲಾಗಿದೆ ಎಂದು ಸಚಿವ ಸೋಮಣ್ಣ ತಿಳಿಸಿದರು.

Home add -Advt

Related Articles

Back to top button