Belagavi NewsBelgaum NewsKarnataka News

*BREAKING: ಬೆಳಗಾವಿಯಲ್ಲಿ ಮತ್ತೊಂದು ದುರಂತ: ಸಿಲಿಂಡರ್ ಸ್ಫೋಟ; ವ್ಯಕ್ತಿ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಮನೆಯಲ್ಲಿದ್ದ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಇನ್ನೋರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಗ್ರಾಮದಲ್ಲಿ ನಡೆದಿದೆ.

ಮಹಾರಾಷ್ಟ್ರದ ಬಿಡ್ ಮೂಲದ ಸೂರ್ಯಕಾಂತ ಸೆಳಕೆ (55) ಮೃತ ದುರ್ದೈವಿ. ಜ್ಞಾನೋದಯ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಚಿಕ್ಕೋಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಸಿಲಿಂಡರ್ ಸ್ಫೋಟದ ತೀವ್ರತೆಗೆ ಪಕ್ಕದ ಮನೆ ಗೋಡೆ ಕುಸಿದಿದ್ದು, ಪಕ್ಕದ ಮನೆಯ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಸದಲಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.


Related Articles

Back to top button