
ಶೀಘ್ರ ಕಾಮಗಾರಿ ಮುಗಿಸುವಂತೆ ಶಾಸಕ ಗಣೇಶ ಹುಕ್ಕೇರಿ ಸೂಚನೆ
ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ – ಚಿಕ್ಕೋಡಿ -ಸದಲಗಾ ವಿಧಾನಸಭಾ ಕ್ಷೇತ್ರದ ಶಾಸಕ ಗಣೇಶ ಹುಕ್ಕೇರಿ ಸದಲಗಾ ಪಟ್ಟಣದಲ್ಲಿ 8 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಡಿಪ್ಲೋಮಾ ಕಾಲೇಜ್ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದರು.
ಆದಷ್ಟು ಬೇಗನೆ ಕಟ್ಟಡವನ್ನು ಪೂರ್ಣಗೊಳಿಸಿ ಎಂದು ಕಟ್ಟಡ ಕಾಮಗಾರಿಯ ನೋಡಲ್ ಅಧಿಕಾರಿಗೆ ಮತ್ತು ಕಾಂಟ್ರಾಕ್ಟರಗೆ ಸೂಚಿಸಿದರು. ಸದಲಗಾ ಪುರಸಭೆ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.