Karnataka News

*ವಾಹನ ತಪಾಸಣೆ ವೇಳೆ ಹರಿದ ಲಾರಿ: ಗಾಯಗೊಂಡಿದ್ದ ಕಾನ್ಸ್ ಟೇಬಲ್ ಚಿಕಿತ್ಸೆ ಫಲಿಸದೇ ಸಾವು*

ಪ್ರಗತಿವಾಹಿನಿ ಸುದ್ದಿ: ವಾಹನ ತಪಾಸಣೆ ವೇಳೆ ಲಾರಿ ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಕಾನ್ಸ್ ಟೇಬಲ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ರಾಮಪ್ಪ ಪೂಜಾರ್ (32) ಮೃತ ಕಾನ್ಸ್ ಟೇಬಲ್. ಗಂಭೀರವಾಗಿ ಗಾಯಗೊಂಡಿದ್ದ ರಾಮಪ್ಪ ಪೂಜಾರ್ ಅವರನ್ನು ದಾವಣಗೆರೆ ಎಸ್.ಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಹೆಬ್ಬಾಳು ಟೋಲ್ ಗೇಟ್ ಬಳಿ ರಾಮಪ್ಪ ನಿನ್ನೆ ವಾಹನ ತಪಾಸಣೆ ನಡೆಸುತ್ತಿದ್ದರು. ಲಾರಿಯೊಂದನ್ನು ತಪಾಸಣೆ ಮಾಡಲು ಮುಂದಾದ ರಾಮಪ್ಪ ಮೇಲೆಯೇ ಚಾಲಕ ಲಾರಿ ಹರಿಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ರಾಮಪ್ಪನನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button