Latest

ಮುರುಘಾಶ್ರೀಗಳಿಗೆ ಮತ್ತೆ ಜೈಲು ವಾಸವೇ ಗತಿ

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಪೊಕ್ಸೋ ಪ್ರಕರಣದಲ್ಲಿ ಜೈಲು ಸೇರಿರುವ ಮುರುಘಾಶ್ರೀಗಳ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ ಮಾಡಿ ಚಿತ್ರದುರ್ಗ ಜಿಲ್ಲಾ ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ.

ಮುರುಘಾಶ್ರೀಗಳ ನ್ಯಾಯಾಂಗ ಬಂಧನ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ಶ್ರೀಗಳನ್ನು ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಗೆ ಹಾಜರು ಪಡಿಸಲಾಗಿತ್ತು. ಈ ವೇಳೆ ಕೋರ್ಟ್ ಮುರುಘಾಶ್ರೀಗಳ ನ್ಯಾಯಾಂಗ ಬಂಧನ ಅವಧಿಯನ್ನು ನವೆಂಬರ್ 3ರವರೆಗೆ ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಆದೇಶ ಹೊರಡಿಸಿದೆ.

Home add -Advt

ಇನ್ನು ಪ್ರಕರಣದ 2ನೇ ಆರೋಪಿ ಲೇಡಿ ವಾರ್ಡನ್ ನ್ಯಾಯಾಂಗ ಬಂಧನ ಅವಧಿಯನ್ನು ನವೆಂಬರ್ 3ರವರೆಗೆ ವಿಸ್ತರಿಸಲಾಗಿದೆ.

ಮತ್ತೊಂದು ಸೇನಾ ಹೆಲಿಕಾಪ್ಟರ್ ಪತನ

https://pragati.taskdun.com/latest/arunachal-pradeshmilitary-choppercrashed/

Related Articles

Back to top button