Kannada NewsKarnataka NewsLatest

*ಆರೋಪಿ ಬಂಧಿಸಲು ನಿರ್ಲಕ್ಯ; ಸಿಪಿಐ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ರಾಜ್ಯಾದ್ಯಂತ ಸುದ್ದಿ ಮಾಡಿದ್ದ ಕೆಇಎ ಹಾಗೂ ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ನನ್ನು ಬಂಧಿಸಲು ನಿರ್ಲಕ್ಷ್ಯ ತೋರಿದ್ದ ಆರೋಪದಲ್ಲಿ ಸಿಪಿಐ ಓರ್ವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ನನ್ನು ಬಂಧಿಸಲು ನಿರ್ಲಕ್ಷ ತೋರಿ ಆತ ತಪ್ಪಿಸಿಕೊಳ್ಳುತ್ತಿದ್ದರೂ ನಿರ್ಲಕ್ಷ್ಯ ಮಾಡಿದ್ದಕ್ಕೆ ಕಲಬುರ್ಗಿ ಜಿಲ್ಲೆಯ ಅಫಜಲಪುರ ಸಿಪಿಐ ಪಂಡಿತ ಸಗರ ಅವರನ್ನು ಅಮಾತನು ಮಾಡಲಾಗಿದೆ.

Home add -Advt

ನ.6ರಂದು ಪೊಲೀಸರು ಆರ್ .ಡಿ.ಪಾಟೀಲ್ ನನ್ನು ಬಂಧಿಸಲು ಹೋಗಿದ್ದಾಗ ಆತ ಕಲಬುರ್ಗಿಯ ಅಪಾರ್ಟ್ ಮೆಂಟ್ ನಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ. ಈ ಹಿನ್ನೆಲೆಯಲ್ಲಿ ನಿರ್ಲಕ್ಷ ಆರೋಪದಲಿ ಸಿಪಿಐ ಪಂಡಿತ ಸಗರ ಅವರನ್ನು ಅಮಾನತು ಮಾಡಿ ಐಜಿಪಿ ಆದೇಶ ಹೊರಡಿಸಿದ್ದಾರೆ.


Related Articles

Back to top button