
ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರೂ ಸ್ಥಳದಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಪಣ್ಣೆದೊಡ್ಡಿ ಬಳಿ ನಡೆದಿದೆ.
ಪಣ್ಣೆದೊಡ್ಡಿ ಗ್ರಾಮದ ವಿನಯ್ (27) ಹರಹಳ್ಳಿಯ ಪ್ರಸನ್ನ (30) ಮೃತ ದುರ್ದೈವಿಗಳು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇಬ್ಬರು ಬೈಕ್ ನಲ್ಲಿ ಬರುತ್ತಿದ್ದ ವೇಳೆ ಅಪರಿಚಿತವಾಹನ ಬೈಕ್ ಗೆ ಗುದ್ದಿ ತೆರಳಿದೆ. ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ದುರ್ಮರಣವನ್ನಪ್ಪಿದ್ದಾರೆ.
ಮದುವೆಯಾಗುವುದಾಗಿ ನಂಬಿಸಿ ನಟಿಗೆ ಮೋಸ; ಖ್ಯಾತ ನಿರ್ಮಾಪಕ ಅರೆಸ್ಟ್