Belagavi NewsBelgaum NewsKannada NewsKarnataka NewsLatest

*ಬೆಳಗಾವಿ: ಸಿಲಿಂಡರ್ ಸ್ಫೋಟ ದುರಂತ; ಇಬ್ಬರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಬಸವನಗಲ್ಲಿಯಲ್ಲಿ ನಡೆದಿದ್ದ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಉಡುಪಿ ಮೂಲದ ಕಾಮಾಕ್ಷಿ ಭಟ್ ಹಾಗೂ ಹೇಮಂತ್ ಭಟ್ ಮೃತ ದುರ್ದೈವಿಗಳು. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ.

Home add -Advt

ಭಾನುವಾರ ಮಧ್ಯಾಹ್ನ ಬಸವನಗಲ್ಲಿಯ ಮನೆಯಲ್ಲಿ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಐವರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಭೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಾಯಾಳುಗಳಲ್ಲಿ ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಖಡೇಬಜಾರ್ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button