ಲಾಕ್ ಡೌನ್ ಮುಂದುವರೆಸಬೇಕೊ ಬೇಡವೋ ಎಂಬ ಬಗ್ಗೆ ಚರ್ಚಿಸಿ ನಿರ್ಧಾರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜನರು ಕಟ್ಟುನಿಟ್ಟಾಗಿ ಲಾಕ್ ಡೌನ್ ನಿಯಮಗಳನ್ನು ಪಾಲಿಸಬೇಕು ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಸಿಎಂ ಯಡಿಯೂರಪ್ಪ, ವಿಶ್ವದಾದ್ಯಂತ ಕೋವಿಡ್ – 19 ಸೋಂಕಿನಿಂದ ಉಂಟಾಗುತ್ತಿರುವ ಹಾನಿ ಎಲ್ಲರಿಗೂ ತಿಳಿದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜನರ ಜೀವ ರಕ್ಷಣೆಗಾಗಿ ದೇಶಾದ್ಯಂತ ಏ.14ರವರೆಗೆ ಲಾಕ್‍ಡೌನ್ ಘೋಷಣೆ ಮಾಡಿದ್ದಾರೆ. ಹಾಗಾಗಿ ರಾಜ್ಯದ ಜನತೆ ಲಾಕ್​​ಡೌನ್ ಅನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದು ಮನವಿ ಮಾಡಿದ್ದಾರೆ.

Home add -Advt

ನಮ್ಮ ರಾಜ್ಯದಲ್ಲಿ ಬೀದರ್, ಮೈಸೂರು, ಮಂಗಳೂರು, ಬೆಂಗಳೂರು ನಗರ, ಕಲಬುರಗಿ ಜಿಲ್ಲೆಗಳಲ್ಲಿ ವೈರಸ್ ಪೀಡಿತರ ಸಂಖ್ಯೆ ದಿನೇ ದಿನೇ ಗಣನೀಯವಾಗಿ ಹೆಚ್ಚುತ್ತಿದೆ. ಈ ವೈರಸ್ ನಿಯಂತ್ರಣಕ್ಕಾಗಿ ಗಡಿ ಪ್ರದೇಶಗಳನ್ನು ಮುಚ್ಚುವುದು, ಸಾರ್ವಜನಿಕವಾಗಿ ಹೆಚ್ಚು ಹೆಚ್ಚು ಓಡಾಡುವಂತಹ ಪ್ರದೇಶಗಳಿಗೆ ನಿರ್ಬಂಧಗಳನ್ನು ವಿಧಿಸಿರುವುದು, ಧಾರ್ಮಿಕ ಸ್ಥಳಗಳಲ್ಲಿ ಜನರು ಸೇರದಂತೆ ನಿರ್ಬಂಧಿಸುವುದರ ಜೊತೆಗೆ ಕೊರೋನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರವು ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಆದ್ದರಿಂದ ಲಾಕ್ ಡೌನ್​​ನ ಹಿಂದಿನ ಆಶಯವನ್ನು ಹಾಗೂ ದೇಶಕ್ಕೆ ಎದುರಾಗಬಹುದಾದ ಅಪಾಯವನ್ನು ಜನರು ಅರಿತು ಲಾಕ್ ಡೌನ್ ಆದೇಶ ಪಾಲಿಸಬೇಕಾಗಿದೆ ಎಂದಿದ್ದಾರೆ.

ಲಾಕ್ ಡೌನ್ ನನ್ನು ಏ.14ರ ಬಳಿಕ ವಿಸ್ತರಿಸಬೇಕೋ ಬೇಡವೋ ಎಂಬ ಬಗ್ಗೆ ಕೂಲಂಕುಷವಾಗಿ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿಯೂ ಇದೇ ವೇಳೆ ತಿಳಿಸಿದ್ದಾರೆ.

Related Articles

Back to top button