Kannada NewsKarnataka NewsLatest
*ಮತ್ತೊಂದು ದುರಂತ: ಅಂಡರ್ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿತ: ಓರ್ವ ಸಾವು*

ಪ್ರಗತಿವಾಹಿನಿ ಸುದ್ದಿ: ಅಂಡರ್ ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿದು ಓರ್ವ ಕಾರ್ಮಿಕ ಮೃತಪಟ್ಟಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಕಂಠೀರವ ಸ್ಟುಡಿಯೋ ಮುಂಭಾಗ ಹಾಗೂ ಡಾ.ರಾಜ್ಕುಮಾರ್ ಪುಣ್ಯಭೂಮಿ ಬಳಿ ನಡೆಯುತ್ತಿದ್ದ ಕಾಮಗಾರಿ ವೇಳೆ ಈ ದುರಂತ ಸಂಭವಿಸಿದೆ. ಅಂಡರ್ಪಾಸ್ ನಿರ್ಮಾಣಕ್ಕಾಗಿ ತೋಡಲಾಗಿದ್ದ ಬೃಹತ್ ಗುಂಡಿಯ ಮಣ್ಣಿನ ತಡೆಗೋಡೆ ಕುಸಿದು ಬಿದ್ದು, ಓರ್ವ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಅವಶೇಷಗಳ ಅಡಿಯಲ್ಲಿ ಇನ್ನೂ ಓರ್ವ ಕಾರ್ಮಿಕ ಸಿಲುಕಿಕೊಂಡಿದ್ದಾನೆ. ರಕ್ಷಣಾ ಕಾರ್ಯಾಚರಣೆ ಬರದಿಂದಸಾಗಿದೆ.
ಅಂಡರ್ಪಾಸ್ ಕಾಮಗಾರಿಗಾಗಿ ರಸ್ತೆಯಲ್ಲಿ ಸುಮಾರು 20 ಅಡಿ ಆಳದವರೆಗೆ ಮಣ್ಣನ್ನು ಅಗೆಯಲಾಗಿತ್ತು. ಇಂದು ಎಂದಿನಂತೆ ಕಾರ್ಮಿಕರು ಕಾಮಗಾರಿಯಲ್ಲಿ ತೊಡಗಿದ್ದಾಗ ಮೇಲಿಂದ ಏಕಾಏಕಿ ಮಣ್ಣಿನ ತಡೆಗೋಡೆ ಕುಸಿದುಬಿದ್ದು ಈ ದುರಂತ ನಡೆದಿದೆ.




