Kannada NewsLatest

ನೂತನ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯ ನೂತನ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ್ ಅವರು ಮಂಗಳವಾರ (ನ.16) ಅಧಿಕಾರ ಸ್ವೀಕರಿಸಿದರು.

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ವರ್ಗಾವಣೆಗೊಂಡಿದ್ದಾರೆ.
ಅಧಿಕಾರ ಸ್ವೀಕರಿಸಿದ ನೂತನ ಜಿಲ್ಲಾಧಿಕಾರಿಗಳು, ಪರಿಷತ್ ಚುನಾವಣೆ ಸಿದ್ಧತೆ ಹಾಗೂ ನಾಮಪತ್ರ ಸ್ವೀಕಾರ ಪ್ರಕ್ರಿಯೆ ಕುರಿತು ಮಾಹಿತಿಯನ್ನು ಪಡೆದುಕೊಂಡರು.

ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಬೈಲಹೊಂಗಲ ಉಪ ವಿಭಾಗಾಧಿಕಾರಿ ಶಶಿಧರ್ ಬಗಲಿ ಮತ್ತಿತರರು ಉಪಸ್ಥಿತರಿದ್ದರು.

ಕಲಬುರ್ಗಿಯ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿಯಾಗಿದ್ದ ವೆಂಕಟೇಶಕುಮಾರ್ ಅವರನ್ನು ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿಯ ಜಿಲ್ಲಾಧಿಕಾರಿಯಾಗಿ ಸರಕಾರ ವರ್ಗಾವಣೆಗೊಳಿಸಿದೆ.

Home add -Advt

ಪ್ರವಚನ ಮಾಡುವಾಗಲೇ ತೀವ್ರ ಹೃದಯಾಘಾತ; ವೇದಿಕೆ ಮೇಲೇಯೇ ಲಿಂಗೈಕ್ಯರಾದ ಸಂಗನಬಸವ ಮಹಾಸ್ವಾಮೀಜಿ

Related Articles

Back to top button