ಪ್ರಗತಿವಾಹಿನಿ ಸುದ್ದಿ, ಖಾನಾಪುರ
ಜಾಂಬೋಟಿ-ಕಣಕುಂಬಿ ಮಧ್ಯೆ ಕಾರು ಮತ್ತು ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದ್ದು ಎರಡೂ ಸಂಪೂರ್ಣ ಸುಟ್ಟು ಹೋಗಿವೆ.
ಘಟನೆಯಲ್ಲಿ ಓರ್ವ ವ್ಯಕ್ತಿ ಗಂಭೀರ ಗಾಯಗೊಂಡಿದ್ದಾನೆ. ಗುರುವಾರ ಬೆಳಗ್ಗೆ 11 ಗಂಟೆ ಹೊತ್ತಿಗೆ ಈ ಘಟನೆ ನಡೆದಿದ್ದು, ಅರ್ಧ ಗಂಟೆಯೂ ಹೆಚ್ಚು ಹೊತ್ತು ರಸ್ತೆ ಸಂಚಾರ ಅಸ್ತವ್ಯಸ್ತಗೊಂಡ ವರದಿಯಾಗಿದೆ. ಅಪಘಾತದ ಪರಿಣಾಮ ಬಹುದೂರದವರೆಗೆ ಎರಡೂ ಕಡೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸ್ಥಳಕ್ಕೆ ಖಾನಾಪುರ ಪೊಲೀಸರು ಧಾವಿಸಿದ್ದು ಪರಿಶೀಲನೆ ನಡೆಸಿದ್ದಾರೆ.