Kannada NewsKarnataka NewsLatestPolitics

*ಕೋಲಾರಕ್ಕೆ ಅಚ್ಚರಿ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್*

ಮುನಿಯಪ್ಪ ಅಳಿಯಗೆ ಸಿಗದ ಟಿಕೆಟ್

ಪ್ರಗತಿವಾಹಿನಿ ಸುದ್ದಿ: ಕೋಲಾರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಫೈನಲ್ ಆಗಿದ್ದು, ಬಣ ಬಡಿದಾಟಕ್ಕೆ ಬ್ರೇಕ್ ಬಿದ್ದಿದೆ. ಕೋಲಾರ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಕೆ.ವಿ.ಗೌತಮ್ ಗೆ ಎಐಸಿಸಿ ಟಿಕೆಟ್ ಘೋಷಣೆ ಮಾಡಿದೆ.

Home add -Advt

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿತ್ತು. ಸಚಿವ ಕೆ.ಹೆಚ್.ಮುನಿಯಪ್ಪ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣಗಳ ನಡುವೆ ಟಿಕೆಟ್ ಗಾಗಿ ಕಿತ್ತಾಟ ಆರಂಭವಾಗಿತ್ತು. ಸಚಿವ ಮುನಿಯಪ್ಪ ತನ್ನ ಅಳಿಯ ಚಿಕ್ಕಪೆದ್ದಣ್ಣನಿಗೆ ಕೋಲಾರ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದರೆ ರಮೇಶ್ ಕುಮಾರ್ ತನ್ನ ಆಪ್ತರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದ್ದಾರು.

ಇದೀಗ ಬಣ ಬಡಿದಾಟಕ್ಕೆ ಸೊಪ್ಪು ಹಾಕದ ಕಾಂಗ್ರೆಸ್ ಹೈಕಮಾಂಡ್ ಕೆ.ವಿ.ಗೌತಮ್ ಗೆ ಟಿಕೆಟ್ ಘೋಷಿಸಿದೆ. ಈ ಮೂಲಕ ಇಬ್ಬರ ಜಗಳದಲ್ಲಿ ಮೂರನೇಯವರಿಗೆ ಲಾಭ ಎಂಬಂತೆ ಕೋಲಾರ ಕಾಂಗ್ರೆಸ್ ಟಿಕೆಟ್ ಕೆ.ವಿ.ಗೌತಮ್ ಪಾಲಾಗಿದೆ.

Related Articles

Back to top button