Politics

*ಡಿಸಿಎಂ, ಗೃಹ ಸಚಿವರಿಗೆ ದಿಢೀರ್ ಬುಲಾವ್: ಸಿಎಂ ನಿವಾಸದಲ್ಲಿ ತುರ್ತು ಸಭೆ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಗೃಹ ಸಚಿವ ಪರಮೇಶ್ವರ್ ಅವರಿಗೆ ದಿಢೀರ್ ಬುಲಾವ್ ನೀಡಿರುವ ಹಿನ್ನೆಲೆಯಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ಅರ್ಧಕ್ಕೆ ನಿಲ್ಲಿಸಿ ಇಬ್ಬರು ನಾಯಕರು ಸಿಎಂ ನಿವಾಸಕ್ಕೆ ದೌಡಾಯಿಸಿರುವ ಬೆಳವಣಿಗೆ ನಡೆದಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಮಹತ್ವದ ಸಭೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಹಾಗೂ ಗೃಹ ಸಚಿವರಿಗೆ ತುರ್ತು ಬುಲಾವ್ ನೀಡಿದ್ದಾರೆ ಎನ್ನಲಾಗಿದೆ.

ಬೇರೆ ಬೇರೆ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಗೃಹ ಸಚಿವ ಪರಮೇಶ್ವರ್, ಎಲ್ಲಾ ಕಾರ್ಯಕ್ರಮಗಳನ್ನು ಮೊಟಕುಗೊಳಿಸಿ ಸಿಎಂ ನಿವಾಸಕ್ಕೆ ಆಗಮಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button