
ಪ್ರಗತಿವಾಹಿನಿ ಸುದ್ದಿ: ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ನಟಿ ರನ್ಯಾ ಜೊತೆಗೆ ಸಂಪರ್ಕದಲ್ಲಿದ್ದ ಇಬ್ಬರು ಸಚಿವರ ಹೆಸರನ್ನು ನಾಳೆ ಸದನದಲ್ಲಿ ಬಹಿರಂಗ ಪಡಿಸುತ್ತೇನೆ ಎನ್ನುವ ಮೂಲಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ಕುರಿತು ಸದನದಲ್ಲಿ ಮಾತನಾಡುತ್ತೇನೆ. ಈ ನಟಿಯೊಂದಿಗೆ ಸಂಪರ್ಕ ಹೊಂದಿದ್ದ ಇಬ್ಬರು ಸಚಿವರ ಹೆಸರನ್ನು ಸದನದಲ್ಲಿ ಹೇಳುತ್ತೀನಿ ಎಂದಿದ್ದಾರೆ. ಆಕೆಗೆ ಪ್ರೊಟೋಕಾಲ್ ಕೊಟ್ಟವರ ಮಾಹಿತಿ ಸಂಗ್ರಹ ಮಾಡಿದ್ದೇವೆ. ಚಿನ್ನ ಎಲ್ಲಿಂದ ತಂದಿದ್ದಾರೆ? ಎಲ್ಲಿಟ್ಟು ತಂದಿದ್ದಾರೆ ಎಂಬುದು ಗೊತ್ತಿದೆ ಎಂದು ಯತ್ನಾಳ್ ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




