Kannada NewsLatestNationalPolitics

*ನಾವು ಸಾಧಿಸಿದ್ದೇವೆ: ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಸಿಜೆಪಿ ಮುಖ್ಯಸ್ಥ ಅಭಿಜಿತ್ ದೀಪ್ಕೆ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ: ನವದೆಹಲಿ: ನೀಟ್ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ನಮ್ಮ ಹೋರಾಟಕ್ಕೆ ಜಯ ಸಿಕ್ಕಿದೆ. ನಾವು ಸಾಧಿಸಿದ್ದೇವೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ತಿಳಿಸಿದ್ದಾರೆ.

ಜಂತರ್-ಮಂತರ್ ನಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅಭಿಜಿತ್ ದೀಪ್ಕೆ ನಮ್ಮ ಹೋರಾಟಗಳಿಗೆ ಜಯ ಸಿಕ್ಕಿದೆ. ನಾವು ಸಾಧಿಸಿದ್ದೇವೆ. ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ ಎಂದಿದ್ದಾರೆ.

ನಮ್ಮ ಒಂದು ಬೇಡಿಕೆ ಈಡೇರಿದೆ. ನಮ್ಮ ಇನ್ನೂ ಎರಡು ಬೇಡಿಕೆಗಳಿವೆ. ಸಂತ್ರಸ್ತ ವಿದ್ಯಾರ್ಥಿ ಕುಟುಂಬಗಳಿಗೆ 1 ಕೋಟಿ ಪರಿಹಾರ ನೀಡಬೇಕು. ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕ್ರಮವಾಗಬೇಕು ಎಂದು ಒತ್ತಾಯಿಸಿದ್ದಾರೆ.

ಈ ಸರ್ಕಾರದಲ್ಲಿ ರಾಜೀನಾಮೆ ಎಂಬುದು ಇಲ್ಲ, ಸಚಿವರ ರಾಜೀನಾಮೆ ಪಡೆಯಲು ಸಾಧ್ಯವಿಲ್ಲ ಎಂದು ಹೇಳಲಾಗಿತ್ತು. ಆದರೆ ನಮ್ಮೆಲ್ಲರ ಒಗ್ಗಟ್ಟಿನ ಹೋರಾಟದಿಂದ ನಾವು ಅದನ್ನು ಸಾಧಿಸಿದ್ದೇವೆ. ಈ ಜಯದ ಯಶಸ್ಸು ಎಲ್ಲಾ ವಿದ್ಯಾರ್ಥಿಗಳಿಗೆ ಸಲ್ಲುತ್ತದೆ ಎಂದು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button