Karnataka NewsLatestPolitics

*ಭಾವನಾ ರಾಮಣ್ಣ ಸೇರಿದಂತೆ 32 ಕೆಪಿಸಿಸಿ ಪದಾಧಿಕಾರಿಗಳಿಗೆ ಗೇಟ್ ಪಾಸ್ ಆದೇಶ ಹೊರಡಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಭೆಗೆ ಗೈರಾಗಿದ್ದ ಕೆಪಿಸಿಸಿ ಪದಾಧಿಕಾರಿಗಳಿಗಳಿಗೆ ಗೇಟ್ ಪಾಸ್ ನೀಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ.

ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ, ಭಾವನಾ ರಾಮಣ್ಣ, ಶಿವಮೂರ್ತಿ ನಾಯಕ್, ಎಂ ಸಿ ವೇಣುಗೋಪಾಲ್, ಷಣ್ಮುಖ ಶಿವಳ್ಳಿ, ಸಿಆರ್ ಮನೋಹರ್ ಸೇರಿದಂತೆ ಮೂವರು ಕೆಪಿಸಿಸಿ ಉಪಾಧ್ಯಕ್ಷರು, 29 ಪ್ರಧಾನ ಕಾರ್ಯದರ್ಶಿಗಳಿಗೆ ಡಿಕೆಶಿವಕುಮಾರ್ ಗೇಟ್ ಪಾಸ್ ನೀಡಿದ್ದಾರೆ.ತಕ್ಷಣವೇ ಈ ನಾಯಕರನ್ನು ಪಕ್ಷದ ಹುದ್ದೆಯಿಂದ ಕೈ ಬಿಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Home add -Advt

ಕರ್ನಾಟಕ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಲಾ ಅವರು ಪಕ್ಷದ ಸಭೆ ಗೈರಾಗಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಈ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಗೈರಾಗಿರುವ ನಾಯಕರಿಗೆ ಗೇಟ್‌ಪಾಸ್‌ ನೀಡುವ ಮೂಲಕ ಬಿಸಿ ಮುಟ್ಟಿಸಿದ್ದಾರೆ.


Related Articles

Back to top button