Karnataka News

*ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವು*

ಪ್ರಗತಿವಾಹಿನಿ ಸುದ್ದಿ: ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿರುವ ಘೋರ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಳಿ ಬೀಚ್ ರೆಸಾರ್ಟ್ ನಲ್ಲಿ ನಡೆದಿದೆ.

Home add -Advt

ಮಂಗಳೂರಿನ ಉಚ್ಚಿಲ ಬೀಚ್ ರೆಸಾರ್ಟ್ ನಲ್ಲಿ ಈ ದುರಂತ ಸಂಭವಿಸಿದೆ. ರೆಸಾರ್ಟ್ ನ ಈಜುಕೊಳದಲ್ಲಿ ಈಜಲು ಹೋದವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಮೃತ ಯುವತಿಯರು ಮೈಸೂರು ಮೂಲದವರು ಎಂದು ತಿಳಿದುಬಂದಿದೆ. ನಿತಿಶಾ ಎಂ.ಡಿ (21), ಪಾರ್ವತಿ ಎನ್ (20) ಕೀರ್ತನಾ (21) ಮೃತ ಯುವತಿಯರು.

ನಿನ್ನೆ ಬೀಚ್ ರೆಸಾರ್ಟ್ ಗೆ ಬಂದಿದ್ದ ಯುವತಿಯರು ಇಂದು ಈಜಲು ಈಜುಕೊಳದಲ್ಲಿ ಇಳಿದಿದ್ದ ವೇಳೆ ದುರಂತ ಸಂಭವಿಸಿದೆ. ನೀರಿನಲ್ಲಿ ಮುಳುಗುತ್ತಿದ್ದ ಒಬ್ಬರನ್ನು ರಕ್ಷಿಸಲು ಹೋಗಿ ಮೂವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

Related Articles

Back to top button