Kannada NewsKarnataka NewsLatest

*ಟಿಪ್ಪರ್ ಹಾಗೂ ಕಾರು ಡಿಕ್ಕಿಯಾಗಿ ಹೊತ್ತಿಕೊಂಡ ಬೆಂಕಿ: ಚಾಲಕ ಸಜೀವದಹನ*

ಪ್ರಗತಿವಾಹಿನಿ ಸುದ್ದಿ: ಟಿಪ್ಪರ್ ಹಾಗೂ ಇನ್ನೋವಾ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಬೆಂಕಿ ಹೊತ್ತಿಕೊಂಡ ಪರಿಣಾಮ ಚಾಲಕ ಸಜೀವದಹನವಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿಯಲ್ಲಿ ನಡೆದಿದೆ.

ಚಂದ್ರಶೇಖರ್ ಮೃತ ಚಾಲಕ. ಹುಣಸೂರು ಮೂಲದವರು. ಹುಣಸೂರು ಕಡೆಗೆ ಹೋಗುತ್ತಿದ್ದ ಕಾರು, ಶ್ರೀರಂಗಪಟ್ಟ ಕಡೆಗೆ ಬರುತ್ತಿದ್ದ ಟಿಪ್ಪರ್ ಲಾರಿ ನಡುವೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ಕಾರು ಧಗಧಗನೆ ಹೊತ್ತಿ ಉರಿದಿದೆ. ಕಾರಿನಿಂದ ಹೊರಬರಲಾಗದೇ ಚಾಲಕ ಕಾರಿನೊಳಗೇ ಸಜೀವದಹನರಾಗಿದ್ದಾರೆ.

Home add -Advt

ಶ್ರೀರಂಗಪಟ್ಟಣ ಟೌನ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Related Articles

Back to top button